ದಾವೀದನು ಗತ್ ಊರಿಗೆ ಓಡಿಹೋದದ್ದು
10 ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು. 11 ಆಕೀಷನ ಸೇವಕರು, "ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?" ಎಂದು ಮಾತನಾಡಿಕೊಂಡರು. 12 ದಾವೀದನು 21:12 ಲೂಕ 2:19; ಮೀಕ. 1:15.ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ, 13 ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು. 14 ಆಗ ಆಕೀಷನು ತನ್ನ ಸೇವಕರಿಗೆ, "ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ? 15 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?" ಅಂದನು.