Pular para o conteúdo
Publicidade

1 ಸಮುವೇಲನು 23:16-18

IRVKAN Indian Revised Version (IRV) - Kannada - 2019

16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ, 17 ದಾವೀದನಿಗೆ, "ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ" ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು. 18 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.

Em outras traduções

  1. OKCV Kannada Contemporary Version

    16 ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು. 17 ಯೋನಾತಾನನು ಅವನಿಗೆ, "ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ," ಎಂದನು. 18 ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.