2 ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು. 3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, "ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ" ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ 4 4:4 ವಿಮೋ 25:22.ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು. 5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. 6 ಫಿಲಿಷ್ಟಿಯರು ಇದನ್ನು ಕೇಳಿ, "ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ" ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು. 7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, "ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. 8 ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ! 9 4:9 1 ಕೊರಿ 16:13.ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು" ಎಂದು ಹೇಳಿಕೊಂಡು 10 ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. 11 4:11 ಕೀರ್ತ 78:60-61.ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.