6 5:6 ಅ.ಕೃ. 13:11. ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು. 7 ಅಷ್ಡೋದಿನ ಜನರು ಅದನ್ನು ನೋಡಿ, "ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ" ಎಂದು ಹೇಳಿ 8 5:8 ಯೆಹೋ. 13:3.ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, "ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?" ಎಂದು ಕೇಳಲು ಅವರು, "ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು." ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. 9 ಮಂಜೂಷವು ಅಲ್ಲಿ ಹೋದ ಮೇಲೆ 5:9 ಧರ್ಮೋ 2:15.ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು. 10 ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, "ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ" ಎಂದು ಕೂಗಿಕೊಂಡರು. 11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, "ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ" ಅಂದರು.