10 ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು. 11 ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು. 12 ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು. 13 ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು. 14 ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು. 15 ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
Publicidade
1 ಸಮುವೇಲನು 6
Estes versículos te tocaram? Ore agora!
+581 estão orando agora.
Junte-se à corrente de oração.