ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ
3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, 1:3 1 ತಿಮೊ 6:3 ಗಲಾ 1:6,7ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, 4 1:4 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, 1:4 ತೀತ 3:9ವಂಶಾವಳಿಗಳೂ 1:4 1 ತಿಮೊ. 6:4 ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.