16 ಯಾವಾಗಲೂ ಸಂತೋಷಿಸಿರಿ, 17 ಎಡೆಬಿಡದೆ ಪ್ರಾರ್ಥನೆಮಾಡಿರಿ, 18 ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ. 19 ಪವಿತ್ರಾತ್ಮನನ್ನು ನಂದಿಸಬೇಡಿ, 20 ಪ್ರವಾದನೆಗಳನ್ನು ಹಿನೈಸಬೇಡಿರಿ. 21 ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. 22 ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
ಸಮಾಪ್ತಿ ವಾಕ್ಯಗಳು.
23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ. 24 ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.