4 ಆದರೆ ಸಹೋದರರೇ, 5:4 ಕೆಲವು ಪ್ರತಿಗಳಲ್ಲಿ, ಕಳ್ಳರ ಮೇಲೆ ಹಗಲಿನ ಬೆಳಕು ಫಕ್ಕನೆ ಬಂದಿತೋ ಎಂಬಂತೆ ಆ ದಿನವು ಎಂದು ಬರೆದದೆ. ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ 5:4 1 ಯೋಹಾ 2:8:ನೀವು ಕತ್ತಲೆಯಲ್ಲಿರುವವರಲ್ಲ. 5 ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6 ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. 7 ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. 8 ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. 9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
Publicidade