17 ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. 18 ನಾವು 4:18 2 ಕೊರಿ 5:7, ರೋಮಾ. 8:24ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.