ಸಂಧಾನಮಾಡುವ ಸೇವೆ
11 ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು 5:11 2 ಕೊರಿ 4:2ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. 12 5:12 2 ಕೊರಿ 3:1ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ. 13 5:13 2 ಕೊರಿ 11:1,16,7; 12:6,11; ಅ. ಕೃ. 26:24,25ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ. 14 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; 5:14 ರೋಮಾ. 5:15ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. 15 ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ 5:15 ರೋಮಾ. 6:11,12; 14:7ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. 16 ಹೀಗಿರಲಾಗಿ 5:16 ಗಲಾ. 2:6; ಫಿಲಿ. 3:7,8; ಕೊಲೊ 2:11ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ. 17 ಆದ್ದರಿಂದ 5:17 2 ಕೊರಿ 12:2; ಗಲಾ. 1:22ಯಾವನಾದರೂ ಕ್ರಿಸ್ತನಲ್ಲಿದ್ದರೆ 5:17 ಯೋಹಾ 3:3; ರೋಮಾ. 6:4; ಗಲಾ. 6:15ಅವನು ನೂತನ ಸೃಷ್ಟಿಯಾಗಿದ್ದಾನೆ. 5:17 ಯೆಶಾ 43:18,19; ಪ್ರಕ 21:5; ಎಫೆ 2:15; 4:24ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. 5:18 ಕೊಲೊ 1:20; ರೋಮಾ. 5:10ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19 ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು 5:19 ಕೀರ್ತ 32:2; ರೋಮಾ. 4:8; 1 ಕೊರಿ 13:5ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
20 5:20 ಎಫೆ 6:20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.