17 ಆದ್ದರಿಂದ 5:17 2 ಕೊರಿ 12:2; ಗಲಾ. 1:22ಯಾವನಾದರೂ ಕ್ರಿಸ್ತನಲ್ಲಿದ್ದರೆ 5:17 ಯೋಹಾ 3:3; ರೋಮಾ. 6:4; ಗಲಾ. 6:15ಅವನು ನೂತನ ಸೃಷ್ಟಿಯಾಗಿದ್ದಾನೆ. 5:17 ಯೆಶಾ 43:18,19; ಪ್ರಕ 21:5; ಎಫೆ 2:15; 4:24ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. 5:18 ಕೊಲೊ 1:20; ರೋಮಾ. 5:10ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19 ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು 5:19 ಕೀರ್ತ 32:2; ರೋಮಾ. 4:8; 1 ಕೊರಿ 13:5ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
20 5:20 ಎಫೆ 6:20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.