ಯೆರೂಸಲೇಮಿನ ಬಡ ಕ್ರೈಸ್ತರಿಗಾಗಿ ಹಣದ ಸಹಾಯ ಮಾಡುವುದರ ವಿಷಯ
1 ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ, 2 ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ 8:2 ಮಾರ್ಕ 12:44; 2 ಕೊರಿ 9:13ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. 3 ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು. 4 ಇದಕ್ಕೆ ನಾನೇ ಸಾಕ್ಷಿ. 8:4 ರೋಮಾ. 15:25,26,31ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. 5 ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.