ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು
6 ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. 7 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; 9:7 ಧರ್ಮೋ 15:10; 2 ಕೊರಿ 8:12ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ 9:7 ವಿಮೋ 25:2ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.