3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು. 4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
15 ಅವನು, "ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ. 17 ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು" ಎಂದು ಹೇಳಿದನು.
22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.