Pular para o conteúdo
Publicidade

2 ಪೂರ್ವಕಾಲವೃತ್ತಾಂತ 7:12-15

IRVKAN Indian Revised Version (IRV) - Kannada - 2019

12 ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, "ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ. 13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ, 14 ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. 15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

Em outras traduções

  1. OKCV Kannada Contemporary Version

    12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ,

    "ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.

    13 "ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ, 14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು. 15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.