Pular para o conteúdo
Publicidade

2 ಪೂರ್ವಕಾಲವೃತ್ತಾಂತ 9:1-8

ಶೆಬಾ ದೇಶದ ರಾಣಿಯು ಸೊಲೊಮೋನನ ಭೇಟಿಯಾದದ್ದು

1 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. 2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು. 3 ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ, 4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ 5 ಅವನಿಗೆ, "ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. 6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ. 7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು. 8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ" ಎಂದು ಹೇಳಿದಳು.

Estes versículos te tocaram? Ore agora!

+581 estão orando agora.

Junte-se à corrente de oração.