Pular para o conteúdo
Publicidade

2 ಅರಸುಗಳು 20:1-5

IRVKAN Indian Revised Version (IRV) - Kannada - 2019

ಹಿಜ್ಕೀಯನ ರೋಗ ನಿವಾರಣೆ

1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, "‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ" ಎಂದು ಹೇಳಿದನು. 2 ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. 3 "ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ" ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು. 5 "ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

Em outras traduções

  1. OKCV Kannada Contemporary Version

    1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, "ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ," ಎಂದು ಹೇಳಿದನು.

    2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ, 3 "ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ," ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

    4 ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು, 5 ದೇವರು ಅವನಿಗೆ, "ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.