32 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು. 33 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು. 34 ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.