10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
11 ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.