ದಾವೀದನನ್ನು ಇಸ್ರಾಯೇಲರೆಲ್ಲರ ಮೇಲೆ ಅರಸನಾದದ್ದು
1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, "ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ, 2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’" ಅಂದರು. 3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.