12 ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು. 13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು. 14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. 15 ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
Publicidade
2 ಸಮುವೇಲನು 6
Estes versículos te tocaram? Ore agora!
+581 estão orando agora.
Junte-se à corrente de oração.