ದೇವರಿಗೆ ಕೃತಜ್ಞತಾಸ್ತುತಿ
3 1:3 2 ಥೆಸ. 2:13; 1 ಥೆಸ. 1:2, 3; ಎಫೆ 5:20: ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.