10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, 3:10 ಆದಿ 3:19; 1 ಥೆಸ. 4:11:"ಕೆಲಸ ಮಾಡಲೊಲ್ಲದವನು ಊಟಮಾಡಬಾರದು" ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. 11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, 3:11 1 ತಿಮೊ. 5:13; 1 ಪೇತ್ರ. 4:15:ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. 12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
Publicidade