ದಿಯೊತ್ರೇಫನ ಖಂಡನೆಯೂ ದೇಮೇತ್ರಿಯ ಬಗ್ಗೆ ಶ್ಲಾಘನೆಯೂ
9 ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. 10 ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.