Pular para o conteúdo
Publicidade

ಆಮೋಸನು 5:21-24

IRVKAN Indian Revised Version (IRV) - Kannada - 2019

21 "ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ,

ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

22 ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ,

ನಾನು ಅದನ್ನು ಸ್ವೀಕರಿಸುವುದಿಲ್ಲ,

ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.

23 ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ;

ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.

24 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ,

ಧರ್ಮವು ಮಹಾನದಿಯಂತೆ ಹರಿಯಲಿ.

Em outras traduções

  1. OKCV Kannada Contemporary Version

    21 ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.

    ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.

    22 ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ,

    ನಾನು ಅವುಗಳನ್ನು ಅಂಗೀಕರಿಸುವುದಿಲ್ಲ.

    ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ

    ನಾನು ಲಕ್ಷಿಸುವುದಿಲ್ಲ.

    23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ.

    ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.

    24 ಆದರೆ ನ್ಯಾಯವು ನೀರಿನಂತೆಯೂ

    ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.