ಕಡೇ ನ್ಯಾಯತೀರ್ಪನ್ನು ಕುರಿತದ್ದು
11 ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. 20:11 ಕೀರ್ತ 102:26:ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. 12 ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ 20:12 ದಾನಿ. 7:10:ಪುಸ್ತಕಗಳು ತೆರೆಯಲ್ಪಟ್ಟವು. 20:12 ಲೂಕ 10:20; ಫಿಲಿ. 4:3:ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, 20:12 ರೋಮಾ. 14:10; 2 ಕೊರಿ 5:10:ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. 13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. 20:13 ಪ್ರಕ 6:8:ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. 14 ಆ ಮೇಲೆ ಮೃತ್ಯುವೂ ಪಾತಾಳವೂ 20:14 ಲೂಕ 20:36; 1 ಕೊರಿ 15:26; ಪ್ರಕ 21:4:ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. 20:14 ವ. 6:ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ 20:15 ಮತ್ತಾ 13:42, 50. ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.