12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. 21:12 ಯೆಹೆ. 8:31-34:ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. 13 ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 14 21:14 ಇಬ್ರಿ. 11:10; 1 ಕೊರಿ 3:11:ಪಟ್ಟಣದ 21:14 ಅಥವಾ, ಗೋಡೆಗೆ. ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. 21:14 ಮತ್ತಾ 16:18; ಎಫೆ 2:20:ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Publicidade