ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು
1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. 2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು 7:2 ಪೂರ್ವದಿಕ್ಕಿನಿಂದಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, 3 "ನಾವು ನಮ್ಮ ದೇವರ ದಾಸರಿಗೆ 7:3 ಯೆಹೆ. 9:4; ಪ್ರಕ 14:1; 22:4; ಪ್ರಕ 13 16:ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ" ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು 7:4 ಪ್ರಕ 9:16:ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. 5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ, 7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, 8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.