10 ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. 11 "ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.