Pular para o conteúdo
Publicidade

ಅಪೊಸ್ತಲರ ಕೃತ್ಯಗಳು 12:5-12

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.

ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು

6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. 7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; "ತಟ್ಟನೆ ಏಳು" ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. 8 ಆ ದೂತನು ಅವನಿಗೆ; "ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ" ಎಂದು ಹೇಳಲು, ಅವನು ಹಾಗೆಯೇ ಮಾಡಿದನು. "ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ" ಅಂದನು. 9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. 10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

11 ಆಗ ಪೇತ್ರನು ಎಚ್ಚರಗೊಂಡು; "ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು" ಎಂದು ಅಂದುಕೊಂಡನು. 12 ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

Estes versículos te tocaram? Ore agora!

+581 estão orando agora.

Junte-se à corrente de oração.