23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ. 24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.