5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು. 6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. 7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. 8 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
Publicidade