12 ಹೀಗಿರಲಾಗಿ ದೇವರಿಂದ 3:12 ರೋಮಾ. 8:33ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ 3:12 ಫಿಲಿ. 2:1; ಎಫೆ 4:32ಕನಿಕರ, ದಯೆ, 3:12 ಎಫೆ 4:12ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ 3:13 ಮಾರ್ಕ 11:25ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, 3:13 ಎಫೆ 4:32ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14 ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ 3:14 ಎಫೆ 5:2ಪ್ರೀತಿಯನ್ನು ಧರಿಸಿಕೊಳ್ಳಿರಿ. 15 3:15 ಫಿಲಿ. 4:7ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ 3:15 ಎಫೆ 2:16ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16 3:16 ಯೋಹಾ 15:3ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. 3:16 ಎಫೆ 5:19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. 17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ 3:17 ಎಫೆ 5:20ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಕ್ರೈಸ್ತೀಯ ಕುಟುಂಬದ ನಿಯಮಗಳು
18 3:18 ಕೊಲೊ 3:18, 4:1; ಎಫೆ 5:22 ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 19 ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ. 20 ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21 ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.