Pular para o conteúdo
Publicidade

ಪರಮಗೀತೆ 7

ನಲ್ಲ

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ!

ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.

2 ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು,

ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.

3 ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.

4 ನಿನ್ನ ಕೊರಳು ದಂತದ ಗೋಪುರ,

ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ.

ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.

5 ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು,

ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ,

ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.

6 ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ

ನೀನೆಷ್ಟು ಸುಂದರ, ನೀನೆಷ್ಟು ಮನೋಹರ!

7 ನೀಳವಾದ ನಿನ್ನ ಆಕಾರವು ಖರ್ಜೂರದ ಮರ,

ನಿನ್ನ ಸ್ತನಗಳೇ ಅದರ ಗೊಂಚಲುಗಳು.

8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು.

ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ,

ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

ನಲ್ಲೆ

9 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ,7:9 ಉತ್ತಮ ದ್ರಾಕ್ಷಾರಸದ ಹಾಗಿರಲಿ, ಅಥವಾ ನಿನ್ನ ಬಾಯು ಉತ್ತಮ ದ್ರಾಕ್ಷಾರಸದಂತಿರಲಿ.

ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.

10 ನಾನು ನನ್ನ ನಲ್ಲನ ನಲ್ಲೆ,

ಅವನ ಆಶೆಯು ನನ್ನ ಮೇಲೆ.

11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ,

ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ7:11 ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ ಅಥವಾ ಅಡವಿಯ ಹೂವುಗಳ ಮಧ್ಯದಲ್ಲಿ ವಾಸಮಾಡುವ.!

12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ,

ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ,

ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.

13 ಕಾಮಜನಕ ವೃಕ್ಷಗಳು7:13 ಕಾಮಜನಕ ವೃಕ್ಷಗಳು ಮ್ಯಾಂಡ್ರೇಕ್ಸ್: ಅತ್ಯಂತ ಸಿಹಿಯಾದ ವಾಸನೆಯ ಹೂವುಗಳುಳ್ಳ, ಲೈಂಗಿಕ ಆಸೆಯನ್ನು ಹುಟ್ಟಿಸುವ ಮತ್ತು ಫಲವತ್ತತೆಯನ್ನು ಉತ್ತೇಜಿಸುವ ಹಣ್ಣನ್ನು ಉತ್ಪತ್ತಿ ಮಾಡುವ ಒಂದು ವೃಕ್ಷವಾಗಿದೆ ಎಂದು ನಂಬಲಾಗಿದೆ (ಆದಿ 30:14-16). ಪರಿಮಳ ಬೀರುತ್ತಿವೆ, ನನ್ನ ಕಾಂತನೇ,

ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು

ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

Estes versículos te tocaram? Ore agora!

+581 estão orando agora.

Junte-se à corrente de oração.