8 ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, "ನಾನು ಅಶುದ್ಧನಾಗಲಾರೆ, ಕ್ಷಮಿಸು" ಎಂದು ವಿಜ್ಞಾಪಿಸಿದನು.
16 ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.