5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು. 6 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು" ಎಂದು ಸಾರಿದನು.