ದಾನಿಯೇಲನು ಸಿಂಹಗಳ ಗವಿಯಲ್ಲೂ ರಕ್ಷಿತನಾದದ್ದು
1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು. 2 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. 3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.