10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, "ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ" ಎಂದು ಹರಸಿದನು.
22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ" ಎಂದು ಹೇಳಿದನು.
23 ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
27 ಆತನು ಉದ್ಧರಿಸುವವನೂ, ರಕ್ಷಿಸುವವನೂ,
ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ;
ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು."