8 ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
25 ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ7:25 ಒಂದುಕಾಲ, ಎರಡುಕಾಲ, ಅರ್ಧಕಾಲ ಅಂದರೆ ಮೂರುವರೆ ವರ್ಷ. ಅವನ ಕೈವಶವಾಗಿರುವರು.