18 ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. 19 ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. 20 ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. 21 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
Publicidade
ಧರ್ಮೋಪದೇಶಕಾಂಡ 11
Estes versículos te tocaram? Ore agora!
+581 estão orando agora.
Junte-se à corrente de oração.