ಅಸಹ್ಯವಾದ ಆಚಾರವಿಚಾರಗಳು
9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು. 10 ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, 11 ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು. 12 ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.