Pular para o conteúdo
Publicidade

ಧರ್ಮೋಪದೇಶಕಾಂಡ 25:5-10

IRVKAN Indian Revised Version (IRV) - Kannada - 2019

ಮೈದುನನಿಂದ ವಂಶಾಭಿವೃದ್ಧಿ ಆಗಬೇಕೆಂಬ ವಿಷಯ

5 ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು. 6 ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ. 7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, "ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ" ಎಂದು ತಿಳಿಸಬೇಕು. 8 ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, "ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ" ಎಂದು ಹೇಳುವ ಪಕ್ಷಕ್ಕೆ, 9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, "ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ" ಎಂದು ಹೇಳಬೇಕು. 10 ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, "ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು" ಎಂದು ಹೆಸರುಂಟಾಗುವುದು.

Em outras traduções

  1. OKCV Kannada Contemporary Version

    5 ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು. 6 ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.

    7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, "ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ," ಎಂದು ಹೇಳಬೇಕು. 8 ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, "ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ," ಎಂದು ಹೇಳಿದರೆ, 9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, "ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು," ಎಂದು ಹೇಳಲಿ. 10 ಆಮೇಲೆ ಆ ಮನುಷ್ಯನ ಮನೆಯವರಿಗೆ ಇಸ್ರಾಯೇಲಿನಲ್ಲಿ ಕೆರಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರಾಗುವುದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.