ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು
1 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. 2 ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:
12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.