Pular para o conteúdo
Publicidade

ಧರ್ಮೋಪದೇಶಕಾಂಡ 31:7,8

IRVKAN Indian Revised Version (IRV) - Kannada - 2019

7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, "ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು; 8 ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.

Em outras traduções

  1. OKCV Kannada Contemporary Version

    7 ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, "ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು. 8 ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.