5 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
6 ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. 7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.