ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವುಂಟು
1 ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
2 ಹುಟ್ಟುವ ಸಮಯ, ಸಾಯುವ ಸಮಯ,
ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,
3 ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ
ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
4 ಅಳುವ ಸಮಯ, ನಗುವ ಸಮಯ,
ಗೋಳಾಡುವ ಸಮಯ, ಕುಣಿದಾಡುವ ಸಮಯ,
5 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ,
ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
6 ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ,
ಕಾಪಾಡುವ ಸಮಯ, ಬಿಸಾಡುವ ಸಮಯ,
7 ಹರಿಯುವ ಸಮಯ, ಹೊಲಿಯುವ ಸಮಯ,
ಸುಮ್ಮನಿರುವ ಸಮಯ, ಮಾತನಾಡುವ ಸಮಯ,
8 ಪ್ರೀತಿಸುವ ಸಮಯ, ದ್ವೇಷಿಸುವ ಸಮಯ,
ಯುದ್ಧದ ಸಮಯ, ಸಮಾಧಾನದ ಸಮಯ.