9 ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. 10 ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.