16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ 3:16 ಎಫೆ 6:10; ಫಿಲಿ. 4:13; ಕೊಲೊ 1:11:ವಿಶೇಷಬಲವನ್ನು ಹೊಂದುವಂತೆಯೂ, 17 3:17 ಎಫೆ 2:22:ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು 3:17 ವ. 8:ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18 3:18 ಅಥವಾ, ಆ ಸತ್ಯರ್ಥದ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, 3:19 ಎಫೆ 1:23; ಕೊಲೊ 2:10:ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.