25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು 4:25 ಜೆಕ. 8:16; ಕೊಲೊ 3:9:"ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ." ಏಕೆಂದರೆ 4:25 ರೋಮಾ. 12:5:ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26 4:26 ಕೀರ್ತ 4:4."ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. 27 4:27 ಯಾಕೋಬ. 4:7:ಸೈತಾನನಿಗೆ ಅವಕಾಶಕೊಡಬೇಡಿರಿ. 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ 4:28 1 ಥೆಸ. 4:11; 2 ಥೆಸ. 3:8, 11:ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29 4:29 ಎಫೆ 5:4; ಕೊಲೊ 3:8; ಮತ್ತಾ 12:34:ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ 4:29 ಕೊಲೊ 4:6:ಕೇಳುವವರಿಗೆ ಹಿತವಾಗಿ ತೋರುವುದು. 30 4:30 ಯೆಶಾ 63:10; 1 ಥೆಸ. 5:19:ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ 4:30 ಎಫೆ 1:13:ಮುದ್ರೆ ಹೊಂದಿದ್ದೀರಲ್ಲಾ. 31 4:31 ಕೊಲೊ 3:8:ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 4:32 ಕೊಲೊ 3:12,3; 1 ಪೇತ್ರ. 3:8:ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು 4:32 2 ಕೊರಿ 2:7,10; ಮತ್ತಾ 6:14:ಕ್ಷಮಿಸಿರಿ.