13 ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು. 14 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
Publicidade